ತುಮಕೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್ ಸಮೀಪ ನಡೆದಿದೆ.
ಮೃತರನ್ನು ಬೈಕ್ ಸವಾರ ರಾಮಚಂದ್ರ (30) ಹಾಗೂ ಪ್ರಿಯಾ (25) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ಕಡೂರು ತಾಲೂಕು ಬೀರೂರಿನವರಾಗಿದ್ದು ಬೆಂಗಳೂರು ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿ 206ರ ಸಾಗರನಹಳ್ಳಿ ಗೇಟ್ ಸಮೀಪ ಅಪಘಾತವಾಗಿದ್ದು ಬೈಕ್ ಗೆ ಬೆಂಕಿ ಹೊತ್ತಿ ಉರಿದು ಕರಕಲಾಗಿದೆ. ಈ ವೇಳೆ ರಾಮಚಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಗಾಯಗೊಂಡಿದ್ದ ಮಹಿಳೆ ಪ್ರಿಯಾರನ್ನು ಗುಬ್ಬಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗುವ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7