Breaking News
Home / ರಾಜಕೀಯ / ರಾಜ್ಯಗಳಿಗೂ ಕೇಂದ್ರದಿಂದಲೇ ಪೂರೈಕೆ: ಪ್ರಧಾನಿ ಮೋದಿ

ರಾಜ್ಯಗಳಿಗೂ ಕೇಂದ್ರದಿಂದಲೇ ಪೂರೈಕೆ: ಪ್ರಧಾನಿ ಮೋದಿ

Spread the love

ನವದೆಹಲಿ: ಲಸಿಕೆ ವಿತರಣೆ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಮೂಲಕ ಲಸಿಕೆ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.

ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಹತ್ವದ ನಿರ್ಧಾರದ ಕುರಿತು ತಿಳಿಸಿದ್ದು, ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ ವಿತರಣೆ ಕುರಿತು ಒಂದಷ್ಟು ಟೀಕೆಗಳು ವ್ಯಕ್ತವಾದ್ದರಿಂದ ಲಸಿಕೆ ವಿತರಣೆಯ ಪೂರ್ತಿ ಜವಾಬ್ದಾರಿಯನ್ನು ಕೇಂದ್ರ ಸರ್ಕಾರವೇ ಹೊರಲಿದ್ದು, ಇನ್ನೆರಡು ವಾರದಲ್ಲಿ ಆ ಕುರಿತು ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದರು.

ಸದ್ಯದಲ್ಲೇ ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಉಚಿತವಾಗಿಯೇ ಲಸಿಕೆಯನ್ನು ನೀಡಲಿದೆ. ಲಸಿಕೆಗಾಗಿ ಯಾವುದೇ ರಾಜ್ಯವೂ ಕೇಂದ್ರಕ್ಕೆ ಹಣ ನೀಡಬೇಕಾಗಿಲ್ಲ. ಹಾಗೆಯೇ, ಅಂತಾರಾಷ್ಟ್ರೀಯ ಯೋಗದಿನವಾದ ಜೂ. 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಇನ್ನು, ವ್ಯಾಕ್ಸಿನ್ ತಯಾರಿಕಾ ಸಂಸ್ಥೆಗಳಿಂದ ನೇರವಾಗಿ ಕೇಂದ್ರವೇ ವ್ಯಾಕ್ಸಿನ್ ಖರೀದಿ ಮಾಡಲಿದ್ದು, ಶೇ 25ರಷ್ಟು ವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಶುಲ್ಕ 150 ರೂ ಸರ್ವೀಸ್ ಚಾರ್ಜ್ ಮಾತ್ರ ವಿಧಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ