Breaking News

ಪುಣೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡಕ್ಕೆ 18 ಮಂದಿ ಬಲಿ

Spread the love

ಪುಣೆ: ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ.
ಪಿರಂಗುಟ್ ಗ್ರಾಮದಲ್ಲಿರುವ ‘ಎಸ್‌ವಿಎಸ್‌ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ.

ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ ಡಾ.ರಾಜೇಶ್ ದೇಶಮುಖ್, ಪುಣೆ ಗ್ರಾಮಾಂತರ ಎಸ್‌ಪಿ ಡಾ. ಅಭಿನವ್ ದೇಶಮುಖ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಧಾವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ₹ 2 ಲಕ್ಷ, ಗಾಯಗೊಂಡವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದೆ.

ಮಹಾರಾಷ್ಟ್ರ ಕೈಗಾರಿಕಾಭಿವೃದ್ಧಿ ನಿಗಮ ಮತ್ತು ಪುಣೆ ಮೆಟ್ರೊಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸಿದ್ದಾರೆ. ಮೃತದೇಹಗಳನ್ನು ಪುಣೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕಾರ್ಖಾನೆಯಲ್ಲಿ ಒಟ್ಟು 37 ಮಂದಿ ಕಾರ್ಯನಿರ್ವಹಿಸುತ್ತಿದ್ದರು. 18 ಮಂದಿ ಮೃತಪಟ್ಟಿದ್ದು, ಉಳಿದವರನ್ನು ರಕ್ಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ