Breaking News
Home / ಜಿಲ್ಲೆ / ಬೆಂಗಳೂರು / ಜಿಂದಾಲ್​ಗೆ 3,667 ಎಕರೆ ಭೂಮಿ ಪರಭಾರೆ; ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

ಜಿಂದಾಲ್​ಗೆ 3,667 ಎಕರೆ ಭೂಮಿ ಪರಭಾರೆ; ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

Spread the love

ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,667 ಎಕರೆ ಭೂಮಿ ಪರಭಾರೆ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.

ಕೆ.ಎ.ಪಾಲ್ ಎಂಬುವವರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್​, ಅರ್ಜಿದಾರರ ಪಿಐಎಲ್​ಗೆ ಉತ್ತರಿಸುವಂತೆ ರಾಜ್ಯ ಸರ್ಕಾರ, ಜಿಂದಾಲ್ ಸಂಸ್ಥೆಗೆ ನೋಟಿಸ್ ನೀಡಿದೆ. ಹೈಕೋರ್ಟ್​ನ ಮುಖ್ಯ ವಿಭಾಗೀಯ ಪೀಠ ನೋಟಿಸ್ ನೀಡಿದೆ.

ಸಿಎಂ ಯಡಿಯೂರಪ್ಪ ವಿರುದ್ಧ ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ರಾಜ್ಯದಲ್ಲಿ‌ ಸರ್ವಾಧಿಕಾರಿ ರೀತಿಯಲ್ಲಿ ಜಿಂದಾಲ್​​ಗೆ ಭೂಮಿಯನ್ನ ಪರಭಾರೆ ನಿರ್ಧಾರ ಮಾಡಲಾಗಿದೆ. ಕಾನೂನು ಬಾಹಿರವಾಗಿ ಭೂಮಿ ಪರಭಾರೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.

ಈ ಆರೋಪಕ್ಕೆ ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು. ಹಾಗಾದ್ರೆ ಪರಭಾರೆ ಬಗ್ಗೆ ಸರ್ಕಾರದ ನಿಲುವು ತಿಳಿಸಲು ಕೋರ್ಟ್​ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನ 15ಕ್ಕೆ ಮುಂದೂಡಿತು. ಇನ್ನು ಜಿಂದಾಲ್​ಗೆ ಭೂಮಿ ಪರಭಾರೆ ಮಾಡೋದಕ್ಕೆ ತೀವ್ರ ವಿರೋಧ ಹಿನ್ನೆಲೆಯಲ್ಲಿ, ಸರ್ಕಾರ ಈ ನಿರ್ಧಾರವನ್ನ ಸದ್ಯ ಅಮಾನತಿನಲ್ಲಿಟ್ಟಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ