Breaking News

ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ.

Spread the love

ಕೋಲಾರ : ನಗರದ ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋಲಾರ ನಗರದ ವೈದ್ಯರೊಬ್ಬರ ಕುಟುಂಬದ ಹಿರಿಯರೊಬ್ಬರು ಕಳೆದ ಹನ್ನೊಂದು ದಿನಗಳ ಹಿಂದೆ ಕಿಡ್ನಿ ವೈಫಲ್ಯ ಹಾಗೂ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಇದೇ ನೋವಿನಲ್ಲಿ ಇಡೀ ಕುಟುಂಬ ಮೃತರ ಹನ್ನೊಂದನೇ ದಿನದ ತಿಥಿ ಕಾರ್ಯ ಮಾಡಿದ್ದರು. ಈ ವೇಳೆ ಇಡೀ ಕುಟುಂಬಕ್ಕೊಂದು ಆಘಾತಕಾರಿ ಸುದ್ದಿಯೊಂದು ಎರಗಿ ಬಂದಿದ್ದು, ಕುಟುಂಬದ 8 ಜನರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.ಇಡೀ ಕುಟುಂಬಕ್ಕೆ ಕೊರೊನಾ ಸೊಂಕು ತಗುಲಿದ್ದಾದರೂ ಹೇಗೆ ಎನ್ನುವುದನ್ನು ಹುಡುಕಿದಾಗ ಅಲ್ಲಿ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ ಕುಟುಂಬದ ಹಿರಿಯ ವ್ಯಕ್ತಿಯ ಪತ್ನಿಗೆ ಅನಾರೋಗ್ಯ ಕಾಡಿತ್ತು, ಈ ವೇಳೆ ಅವರನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ಅನಾರೋಗ್ಯ ಪೀಡಿತರ ಆರೈಕೆಗಾಗಿ ಆಸ್ಪತ್ರೆಗೆ ಹೋಗಿ ಬಂದಿದ್ದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ