Breaking News
Home / Uncategorized / ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

Spread the love

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟದ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ? ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದಾರೆ. ಈ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕಾರಣ ಎಂದು ಆರೋಪಿಸಿದರು.

ಅದೆಂತದೋ ಸಿಂಹ, ಎಂಥಾ ಸಿಂಹ.. ಪ್ರತಾಪ ಸಿಂಹ ಮೊದಲು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಸಪೋರ್ಟ್ ಮಾಡುತ್ತಿದ್ದರು, ಆಮೇಲೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್‍ಗೆ ಸಪೋರ್ಟ್ ಮಾಡೋಕೆ ಶುರು ಮಾಡಿದರು. ಬಿಜೆಪಿ ಜನಪ್ರತಿನಿಧಿಗಳಿಂದಲೇ ಈ ಗಲಾಟೆ ನಡೆಯಿತು ಎಂದು ದೂರಿದರು.

ಐಎಎಸ್ ಅಧಿಕಾರಿಗಳಿಗೆ ಸುದ್ದಿಗೋಷ್ಠಿ ಮಾಡಲು ಅಧಿಕಾರ ಕೊಟ್ಟವರು ಯಾರು? ರೋಹಿಣಿ ಸಿಂಧೂರಿ ಜಮೀನು ಒತ್ತುವರಿ ತಡೆಯೋಕೆ ಹೋಗಿದ್ದಕ್ಕೆ ಹೀಗಾಯ್ತು ಅಂದಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು. ಬಿಜೆಪಿ ಜನಪ್ರತಿನಿಧಿಗಳಿಗೆ ರೋಹಿಣಿ ಸಿಂಧೂರಿ ತಗೆಯಬೇಕು, ಶಿಲ್ಪಾ ನಾಗ್ ಅವರಿಗೆ ಡಿಸಿ ಸ್ಥಾನ ಕೊಡಿಸಬೇಕು ಅನ್ನೋದಿತ್ತು. ಅಧಿಕಾರಿಗಳನ್ನು ಹೊಗಳುವುದು, ತೆಗಳುವುದು ಜನಪ್ರತಿನಿಧಿಗಳ ಕೆಲಸವಲ್ಲ. ಜನರ ಕೆಲಸ ಮಾಡುವುದು ಜನ ಪ್ರತಿನಿಧಿಗಳ ಕೆಲಸ. ಎಲ್ಲಾ ಬೆಳವಣಿಗೆಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ ರೇವಣ್ಣ!

Spread the loveಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ