Breaking News
Home / Uncategorized / , ಆಗಸ್ಟ್ 28, 29ರಂದು C.E.T. ಪರೀಕ್ಷೆ

, ಆಗಸ್ಟ್ 28, 29ರಂದು C.E.T. ಪರೀಕ್ಷೆ

Spread the love

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲಾಗುತ್ತಿದ್ದು ಈ ಹಿಂದಿನಂತೆಯೇ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಿಇಟಿ ಬಗ್ಗೆ ಇಂದು ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಕೋರ್ಸ್ ಗಳಿಗೂ ಸಿಇಟಿ ಅಂಕ ಪರಿಗಣಿಸಲು ನಿರ್ಧರಿಸಲಾಗಿದೆ. ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆಯುತ್ತದೆ. ಎರಡನೇ ದಿನ ರಸಾಯನಶಾಸ್ತ್ರ, ಬೌತಶಾಸ್ತ್ರ ಪರೀಕ್ಷೆ ನಡೆಯಲಿದೆ. 3ನೇ ದಿನ ಆಗಸ್ಟ್ 30ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

Spread the loveಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ