ಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ. ಕರಾವಳೀ ಭಾಗದಲ್ಲಿ ಈ ಕೊಲೆ ಭಾರೀ ಸಂಚಲನ ಸೃಷ್ಟಿಸಿತ್ತು.
ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದ್ದು, ಬದುಕಿರುವವರೆಗೂ ಆರೋಪಿಗಳು ಜೈಲಿನಲ್ಲಿ ಕೊಳೆಯಬೇಕಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜೂನ್ ೮ಕ್ಕೆ ಶಿಕ್ಷೆ ತೀರ್ಪು ಪ್ರಕಟ ದಿನಾಂಕ ಮುಂದೂಡಲಾಗಿತ್ತು. ಮೂರು ಪ್ರಮುಖ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ. ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದು, ಭಾಸ್ಕರ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ತೀರ್ಪು ನೀಡಿದ್ದು, ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾರೆ.
ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಈಗಾಗಲೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಸದ್ಯದಲ್ಲಿಯೇ ಪ್ರಕಟಿಸಲಿದೆ