Breaking News

ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

Spread the love

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಅವರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ಸಿ.ಎಂ.ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು.

ಮುಖ್ಯ ಮಂತ್ರಿಗಳ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದ ಎಂದು ಸಿಎಂ ಹೇಳಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ