Breaking News

ಸಿಎಂ ಬದಲಾವಣೆ ಕಾಂಗ್ರೆಸ್‌ನ ಹಗಲುಗನಸು: ಗೋವಿಂದ ಕಾರಜೋಳ ಲೇವಡಿ

Spread the love

ಬಾಗಲಕೋಟೆ: ರಾಜ್ಯದಲ್ಲಿ ಇನ್ನೇನು ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು, ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಭ್ಯರ್ಥಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಅಜೆಂಡಾ ಇಲ್ಲ. ಈ ವಿಚಾರ ಯಾರೂ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಸರ್ಕಾರದ ಮುಂದಿನ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅಂತೆ-ಕಂತೆಗಳಿಗೆ ಫುಲ್‌ಸ್ಟಾಪ್ ಇಡಲು ಹೈಕಮಾಂಡ್ ಕೇಳಿದರೆ ರಾಜೀನಾಮೆ ಕೊಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಕಾರಜೋಳ ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ನವರಿಗೆ ಬಹಳ ಅವಸರವಾಗಿ ರಾಜ್ಯದಲ್ಲಿ ಚುನಾವಣೆ ಬರಬೇಕಿದೆ. ಆದರೆ ಅವಧಿ ಮುಗಿದ ಮೇಲೆಯೇ ಚುನಾವಣೆ ಬರಲಿದೆ. ಮಧ್ಯದಲ್ಲಿ ಬರುವುದಿಲ್ಲ. ಕಾಂಗ್ರೆಸ್‌ನ ಆಸೆಯೂ ಈಡೇರುವುದಿಲ್ಲ ಎಂದು ಕಟುಕಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ