ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ CD ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು.
Laxmi News 24×7