ಬೆಳಗಾವಿ: ಸವದತ್ತಿ ತಾಲ್ಲೂಕಿನ ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್ ಮೇಲೆ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿದ್ದ ಕೃಷಿ ಪರಿಕರಗಳನ್ನು ಜಪ್ತಿ ಮಾಡಿ, ಮಾರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸಿಲಾಗಿದೆ ಎಂದು ಜಾಗೃತ ಕೋಶದ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೊಖಾಶಿ ಅವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳಾದ ಆರ್.ಬಿ.ಪಾಟೀಲ್ ಮತ್ತು ಸುಪ್ರೀತಾ ಅಂಗಡಿ ಅವರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ರೂ. 1,90,000 ಮೌಲ್ಯದ 30 ವಿವಿಧ ಕೀಟನಾಶಕಗಳು, ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ಜಪ್ತಿ ಮಾಡಿಕೊಂಡು ಮಾರಾಟ ಮಳಿಗೆಯನ್ನು ಸೀಜ್ ಮಾಡಿ ಕಾನೂನು ಕ್ರಮ ಜಾರಿಗೊಳಿಸಿದ್ದು ಮೊಕದ್ದಮೆ ಹೂಡುವ ಪ್ರಕ್ರಿಯೆಗೆ ಚಾಲನೆ ನೀಡಿಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದಾಳಿ ಸಂದರ್ಭದಲ್ಲಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರವಿ ವರಗಣ್ಣವರ ಹಾಜರಿದ್ದರು.