Breaking News

ನಾನು ಸಹಿ ಹಾಕಿಲ್ಲ, ಯಾವುದೇ ಊಹಾ ಪೋಹಗಳಿಗೆ ಕಿವಿಗೊಡುವ ಅಗತ್ಯವಿಲ್ಲ .: –ಶಶಿಕಲಾ ಜೊಲ್ಲೆ ,

Spread the love

ಗದಗ: ಕೋವಿಡ್‌ 2ನೇ ಅಲೆಯ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಗದಗ ಜಿಲ್ಲೆಯ ಇಬ್ಬರು ಸಹಿತ ರಾಜ್ಯದಲ್ಲಿ 32 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯಲ್ಲಿ ಒಬ್ಬ ಆಶಾ ಕಾರ್ಯಕರ್ತೆ ಮರಣ ಹೊಂದಿದ್ದು, ಅವರ ಕುಟುಂಬಕ್ಕೆ 30 ಲ.ರೂ. ಪರಿಹಾರ ನೀಡಲಾಗಿದೆ. ಕೋವಿಡ್‌ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರಕಾರ ದಿಂದ ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಅನಾಥ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ. ನೀಡಲಾಗುವುದು. 10ನೇ ತರಗತಿವರೆಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಲ್ಯಾಪ್‌ಟಾಪ್‌ ಒದಗಿಸಲಾಗುವುದು. ಜತೆಗೆ ಹೆಣ್ಣು ಮಕ್ಕಳಿದ್ದಲ್ಲಿ 18 ವರ್ಷಗಳ ಬಳಿಕ 1 ಲಕ್ಷ ರೂ. ನೀಡಲಾಗುವುದು ಎಂದರು.

ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಕೋವಿಡ್‌ ಸವಾಲು ಗಳನ್ನು ಸಮರ್ಥವಾಗಿ ಎದುರಿಸಿರುವ ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಸಂಬಂಧಿಸಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ, ಹೀಗಾಗಿ, ಯಾವುದೇ ಊಹಾ ಪೋಹಗಳಿಗೆ ಕಿವಿಗೊಡುವ ಅಗತ್ಯವಿಲ್ಲ .   –ಶಶಿಕಲಾ ಜೊಲ್ಲೆ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ