Breaking News

ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ : ಸಿದ್ದು ಕಿಡಿ

Spread the love

ಬೆಂಗಳೂರು : ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರುದ್ಧವೇ ಪ್ರತಿಭಟನೆ ಮಾಡಿ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಡೀಸೆಲ್ ದರ 100 ರೂ. ಗಡಿ ದಾಟಿದರೂ ತುಟಿಕ್ ಪಿಟಿಕ್ ಎನ್ನುತ್ತಿಲ್ಲ ಎಂಬ ಜನ ಸಾಮಾನ್ಯರ ಆಕ್ರೊಶದ ಬೆನ್ನಿಗೆ ಈಗ ಕಾಂಗ್ರೆಸ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆಯ ಎಚ್ಚರಿಕೆಯನ್ನು ಕೂಡ ನೀಡಿದೆ.

ಈ ಬಗ್ಗೆ ಟ್ವೀಟರ್ ಖಾತೆಯ ಮೂಲಕ ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸೋಯಿಚ್ಛೆ ಹೆಚ್ಚಿಸುವ ಮೂಲಕ ಕೋವಿಡ್ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಬಿಜೆಪಿ ಸರ್ಕಾರ ಚಪ್ಪಡಿ ಎಳೆದಿದೆ ಎಂದಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸೀಂಗ್ ಅವರನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಸಿಂಗ್ ಕಾಲದಲ್ಲಿ ಪೆಟ್ರೋಲ್ ಬೆಲೆ ಕೇವಲ 1 ರೂ ಏರಿಕೆ ಮಾಡಿದಾಗ ಗುಜರಾತ್ ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ತೀವ್ರ ವಿರೋಧ ಮಾಡಿದ್ದರು. ಈಗ ತಾವೇ ಬೆಲೆಯೇರಿಕೆ ಮಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ ಎಂದು ಪ್ರಶ್ನೆ ಕೇಳುವುದರ ಮೂಲಕ ಕಿಡಿ ಕಾರಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ