Breaking News
Home / ರಾಜಕೀಯ / ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

Spread the love

ಚಿಕ್ಕೋಡಿ: ಲಾಕ್‍ಡೌನ್ ಆಗುವ ಮೊದಲು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ಸರ್ಕಸ್ ಪ್ರದರ್ಶಿಸಲು ಸರ್ಕಸ್ ಕಲಾವಿದರು ಆಗಮಿಸಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಪ್ರದರ್ಶನ ಇಲ್ಲದೆ ಹಣ, ಊಟವಿಲ್ಲದೆ ಕೊರಗುತ್ತಿದ್ದ ಸರ್ಕಸ್ ಕಲಾವಿದರಿಗೆ ಶಾಸಕ ಗಣೆಶ್ ಹುಕ್ಕೇರಿ ದಿನಸಿ ಸಾಮಾಗ್ರಿ ವಿತರಿಸಿದ್ದಾರೆ.

ಸರ್ಕಸ್ ಕಂಪನಿಯ ಕಲಾವಿದರು ಸಂಕಷ್ಟದಲ್ಲಿ ಇರುವುದನ್ನು ಮನಗಂಡು, ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ ಸುಮಾರು ಆರವತ್ತಕ್ಕೂ ಹೆಚ್ಚು ಕಲಾವಿದರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ರೇಶನ್ ಹಾಗೂ ಗೃಹಪಯೋಗಿ ಸಾಮಗ್ರಿಗಳನ್ನು ವಿತರಿಸಿದ್ದಾರೆ


ಕೊರೊನಾ ಹಾಗೂ ಲಾಕಡೌನ್ ಹಿನ್ನೆಲೆ ಅನೇಕ ಕಲಾವಿದರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ದಿನದ ಜೀವನ ಸಾಗಿಸುವುದು ಕೂಡ ಕಷ್ಟವಾಗಿದೆ. ಹಿಗಾಗಿ ನಮ್ಮ ಕ್ಷೇತ್ರದಲ್ಲಿ ಸಮಸ್ಯೆ ಗೊಳಗಾದ ಕಲಾವಿದರ ತಂಡಕ್ಕೆ, ಒಂದು ತಿಂಗಳಿಗೆ ಸಾಕಾಗುವಷ್ಟು ಗೃಹಪಯೋಗಿ ಸಾಮಗ್ರಿಗಳನ್ನು ಹಂಚಿದ್ದೇವೆ. ಈ ಮೂಲಕ ಕಲಾವಿದರ ಸಂಕಷ್ಟದಲ್ಲಿ ಭಾಗಿಯಾಗುವ ಕೆಲಸವನ್ನ ನಾವು ಮಾಡುತ್ತೀದ್ದೇವೆ ಎಂದು ಶಾಸಕ ಗಣೇಶ್ ಹುಕ್ಕೇರಿ ಹೇಳಿದ್ದಾರೆ. ಈ ವೇಳೆ ಚಿಕ್ಕೋಡಿ ಪುರಸಭೆ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ