ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ.
ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬAದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿAದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ
Laxmi News 24×7