Breaking News

ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿ:ಅಧಿಕಾರಿಗಳ ಮೇಲೆ ಕಲ್ಲು ತೂರಾಟ

Spread the love

ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ.

ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ ಸೇರಿ ಮೂವರು ಅಧಿಕಾರಿಗಳಿಗೆ ಗಾಯಗಳಾಗಿವೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್

Spread the loveಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ