Breaking News
Home / ಜಿಲ್ಲೆ / ಬೆಳಗಾವಿ / ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿ:ಅಧಿಕಾರಿಗಳ ಮೇಲೆ ಕಲ್ಲು ತೂರಾಟ

ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿ:ಅಧಿಕಾರಿಗಳ ಮೇಲೆ ಕಲ್ಲು ತೂರಾಟ

Spread the love

ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ.

ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ ಸೇರಿ ಮೂವರು ಅಧಿಕಾರಿಗಳಿಗೆ ಗಾಯಗಳಾಗಿವೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ