Breaking News

ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ್ವಾತಂತ್ರೋತ್ಸವಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಆದ್ರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಬಾರಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಬದಲಾಗಿ ಕೊರೊನಾ ವಾರಿಯರಸ್ ಗೆ ಸನ್ಮಾನ ಮಾಡಿ ಗೌರವಿಸಬೇಕು. ಸರ್ಕಾರದ ನಿಯಮದಂತೆ ಆಚರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಪಾಲಿಕೆ ಆಯುಕ್ತ ಜಗದೀಶ್ ಸೇರಿದಂತೆ ಇತರರು ಇದ್ದರು.

 


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ