ಬೆಂಗಳೂರು: ಕೋವಿಡ್ ಕಾರಣದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಿದ್ದ ಶಿಕ್ಷಣ ಇಲಾಖೆ ಇದೀಗ ಶಾಕ್ ನೀಡಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.
ಎರಡು ಪ್ರಶ್ನೆ ಪತ್ರಿಕೆಗಳನ್ನು ಹಾಳೆಯಲ್ಲಿ ಉತ್ತರಿಸಿ ಸ್ಕ್ಯಾನ್ ಮಾಡಿ ವಾಟ್ಸಪ್ ಅಥವಾ ಇ ಮೇಲ್ ಅಥವಾ ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕು. ಇವುಗಳನ್ನು ಸಂಬಂಧಿಸಿದ ಉಪನ್ಯಾಸಕರು ಮೌಲ್ಯಮಾಪನ ಮಾಡಿ ಅಂಕ ನೀಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಕಾಲೇಜುಗಳಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಮೊದಲ ಪರೀಕ್ಷೆ (ಅಸೈನ್ ಮೆಂಟ್) ಜೂ.10ರಿಂದ 20 ಒಳಗೆ ನಡೆಸಬೇಕು. ಎರಡನೇ ಅಸೈನ್ ಮೆಂಟ್ ನ್ನು ಜೂ.26ರಿಂದ ಜು.5ರ ಒಳಗೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಒಟ್ಟಾರೆ ಪರೀಕ್ಷೆಇಲ್ಲ ಎಂದುಕೊಂಡಿದ್ದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅಚ್ಚರಿ ನೀಡಿದೆ.
Laxmi News 24×7