Breaking News

ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

Spread the love

ಬೆಳಗಾವಿ: ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಹತ್ತಿರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಕಾಚ್ಯಾಗೋಳ(30) ಕೊಲೆಯಾದ ದುರ್ದೈವಿ.

ನಿನ್ನೆ ತಡರಾತ್ರಿ ಈ ಘಟನೆ ಸಂಭವನಿಸಿದ್ದು, ಕೊಲೆಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ. ಇನ್ನು ಮೃತ ಶಿವಾನಂದ್​ ಖಾಸಗಿ ಯೂಟ್ಯೂಬ್ ಚಾನಲ್‌ನ ಸಹ ಸಂಪಾದಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಕೇಸ್ ಆರೋಪಿಗಳ ಪತ್ತೆಗಾಗಿ ಎಸ್​ಪಿ ಲಕ್ಷ್ಮಣ್​ ನಿಂಬರಗಿ ಡಿವೈಎಸ್​ಪಿ ನೇತೃತ್ವದ ತಂಡ ರಚನೆ ಮಾಡಿದ್ದಾರೆ.


Spread the love

About Laxminews 24x7

Check Also

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

Spread the love ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ