Breaking News

ಸೋನು ಸೂದ್ ​ರನ್ನ ಭೇಟಿಯಾಗಲು 700 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿ ಬಂದ ಅಭಿಮಾನಿ..!

Spread the love

ಬಾಲಿವುಡ್​ ನಟ ಸೋನು ಸೂದ್​ ನಟನೆಗಿಂತ ಹೆಚ್ಚಾಗಿ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಬಡ ಜನರ ಪರವಾಗಿ ನಿಂತಿರುವ ಸೂನ್​ ಸೂದ್​ರನ್ನ ಭೇಟಿಯಾಗಬೇಕು ಅಂತಾ ವೆಂಕಟೇಶ್​ ಎಂಬಾತ ಹೈದರಾಬಾದ್​ನಿಂದ ಮುಂಬೈವರೆಗೆ ಕಾಲ್ನಡಿಗೆಯಲ್ಲೇ ಸಾಗಿ ಬಂದಿದ್ದಾನೆ.

ಟ್ವಿಟರ್​ನಲ್ಲಿ ಅಭಿಮಾನಿಯನ್ನ ಭೇಟಿಯಾದ ಫೋಟೋ ಶೇರ್​ ಮಾಡಿರುವ ಸೋನು ಸೂದ್,​ ಅಭಿಮಾನಿಗಳ ಬಳಿ ನನ್ನ ಭೇಟಿಯಾಗಲು ಈ ರೀತಿಯ ಕಷ್ಟವನ್ನ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಟ್ವಿಟರ್​ನಲ್ಲಿ ಫೋಟೋ ಶೇರ್​ ಮಾಡಿರುವ ಸೋನು ಸೂದ್​, ವೆಂಕಟೇಶ್​ ನನ್ನನ್ನ ಭೇಟಿಯಾಗುವ ಸಲುವಾಗಿ ಹೈದರಾಬಾದ್​ನಿಂದ ಮುಂಬೈವರೆಗೆ ಬರಿಗಾಲಿನಲ್ಲೇ ನಡೆದು ಬಂದಿದ್ದಾರೆ. ಇವರು ನಿಜಕ್ಕೂ ಸ್ಪೂರ್ತಿದಾಯಕ . ಆದರೂ ಈ ರೀತಿಯ ಕಷ್ಟ ತೆಗೆದುಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.

ಕೋವಿಡ್​ 19 ಸಂದರ್ಭದಲ್ಲಿ ಸೋನು ಸೂದ್​ ವಲಸೆ ಕಾರ್ಮಿಕರು ಹಾಗೂ ಕೊರೊನಾದಿಂದಾಗಿ ಚಿಕಿತ್ಸೆಗಾಗಿ ಪರದಾಡುತ್ತಿರುವವರ ಪಾಲಿಗೆ ದೇವರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಸಾಕಷ್ಟು ಅಭಿಮಾನಿಗಳನ್ನ ಸೋನು ಸೂದ್​​​ ತಮ್ಮ ಮಾನವೀಯ ಕಾರ್ಯದ ಮೂಲಕವೇ ಗಳಿಸಿದ್ದಾರೆ.

 


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ