Breaking News

ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆ ಜಾರಿಗೊಳಿಸಲು ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ

Spread the love

ನವದೆಹಲಿ : ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ (ಒಎನ್ ಒಆರ್ ಸಿ) ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.

ಪಶ್ಚಿಮ ಬಂಗಾಳ, ಛತ್ತೀಸ್ ಗಢ ಮತ್ತು ಅಸ್ಸಾಂ ಇನ್ನೂ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸುತ್ತಿದ್ದಂತೆ ಈ ಅಭಿಪ್ರಾಯ ಬಂದಿದೆ. ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ ಪಡಿತರ ಚೀಟಿಗಳನ್ನು ನೋಂದಾಯಿಸದ ಸ್ಥಳದಲ್ಲಿ ಪಡಿತರವನ್ನು ಪಡೆಯಲು ಅನುಮತಿಸುತ್ತದೆ.

 

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ಪೀಠವು ವಲಸೆ ಕಾರ್ಮಿಕರಿಗೆ ಆಹಾರ ವಿತರಣೆ ಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಯಾವುದೇ ನೆಪವನ್ನು ಪರಿಗಣಿಸಲಾಗುವುದಿಲ್ಲ ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒನ್ ನೇಷನ್ ಒನ್ ರೇಷನ್ ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ