Breaking News

ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ

Spread the love

ಬೆಂಗಳೂರು: ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕಳೆದ ಶುಕ್ರವಾರ, ಯಡಿಯೂರಪ್ಪ ರಾಜ್ಯಪಾಲರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವಜೂಭಾಯ್ ವಾಲಾ, ಅವರ ಆಪ್ತ ಸಹಾಯಕ ಹಾಗೂ ಏಡ್ ಡಿ ಕ್ಯಾಮ್(ಎಡಿಸಿ) ಕೊರೊನಾ ಟೆಸ್ಟ್​​ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ಕೊರೊನಾ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಜ್ಯಪಾಲರ ಆಪ್ತ ಸಹಾಯಕರ ಲೆಟರ್ ಹೆಡ್‌ನಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಗೃಹ ಸಚಿವರ ಕೊರೊನಾ ವರದಿ ನೆಗೆಟಿವ್:ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಱಪಿಡ್​ ಆ್ಯಂಟಿಜೆನ್ ಟೆಸ್ಟ್​​ಗೆ ಒಳಗಾಗಿದ್ದಾರೆ. ಅವರ ವರದಿಯಲ್ಲಿ ಸೋಂಕು ತಗುಲಿಲ್ಲ ಎಂದು ದೃಢಪಟ್ಟಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ