Breaking News

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

Spread the love

ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಿಗ್ವಿಜಯ ಸಿಂಗ್ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
ದಿಗ್ವಿಜಯ ಸಿಂಗ್ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ದಿಗ್ವಿಜಯ್ ಸಿಂಗ್ ನೀವು ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ ಎಂದು ಟ್ವೀಟ್​ನಲ್ಲಿ ದಿಗ್ವಿಜಯ್ ಸಿಂಗ್​ಗೆ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

ನಿಮ್ಮ ಪಕ್ಷ ಎಲ್ಲದರಲ್ಲೂ ಭಾರತ ವಿರೋಧಿ ನಿಲುವು ತಳೆಯುತ್ತೆ. ಈ ಕಾರಣಕ್ಕಾಗಿ ಜನರು ನಿಮಗೆ, ನಿಮ್ಮ ಪಕ್ಷಕ್ಕೆ ಮತ ನೀಡಲ್ಲ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.

 


Spread the love

About Laxminews 24x7

Check Also

ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

Spread the loveನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ