Breaking News

ಕೋವಿಡ್‌: ಕರ್ನಾಟಕದಲ್ಲಿ 42 ಮಕ್ಕಳು ಅನಾಥ

Spread the love

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 42 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆ. ಇವರ ಬದುಕು ಡೋಲಾಯಮಾನವಾಗಿದೆ.

ರಾಯಚೂರಿನಲ್ಲಿ ನಾಲ್ಕು ಮಕ್ಕಳು ತಬ್ಬಲಿಗಳಾಗಿದ್ದಾರೆ. ಬಾಗಲಕೋಟೆ, ಬೀದರ್‌, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ, ಕೊಡಗು ಹಾಗೂ ಕೋಲಾರದಲ್ಲಿ ತಲಾ ಮೂವರು, ಬೆಳಗಾವಿ, ಬೆಂಗಳೂರು ನಗರ, ಗದಗ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ತಲಾ ಇಬ್ಬರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಮತ್ತು ಮಂಡ್ಯದಲ್ಲಿ ತಲಾ ಒಬ್ಬರು ಮನೆಯ ಆಧಾರಸ್ಥಂಭವಾಗಿದ್ದ ಅಪ್ಪ, ಅಮ್ಮನನ್ನು ಕಳೆದುಕೊಂಡಿದ್ದಾರೆ.

ಪಾಲಕರನ್ನು ಕಳೆದುಕೊಂಡವರ ಪೈಕಿ 20 ಮಂದಿ ಒಂಟಿ ಮಕ್ಕಳು. ಉಳಿದ 22 ಮಂದಿ ಒಡಹುಟ್ಟಿದವರು. ಸದ್ಯ ಈ ಮಕ್ಕಳು, ಅಜ್ಜಿ, ಚಿಕ್ಕಮ್ಮ, ಚಿಕ್ಕಪ್ಪ, ಅತ್ತೆ ಸೇರಿದಂತೆ ಆಪ್ತರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ.

‘ಅನಾಥ ಮಕ್ಕಳಿಗಾಗಿ ರಾಜ್ಯ ಸರ್ಕಾರವು ‘ಬಾಲಸೇವಾ ಯೋಜನೆ’ ಜಾರಿಗೆ ತರಲಿದ್ದು ಮಾಸಿಕ ₹3,500 ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ಒದಗಿಸಲು ಹಲವು ಮಠಗಳು ಹಾಗೂ ಸಂಘ ಸಂಸ್ಥೆಗಳು ಮುಂದೆ ಬಂದಿವೆ. ಮಕ್ಕಳನ್ನು ಸರ್ಕಾರದಿಂದ ನಡೆಸುವ ಆರೈಕೆ ಕೇಂದ್ರಗಳಿಗೆ ಸೇರಿಸಿದರೆ ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂದು ಸಂಬಂಧಿಕರು ಹೆದರುತ್ತಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ