Home / ಜಿಲ್ಲೆ / ಬೆಳಗಾವಿ / ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ

ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ

Spread the love

ಬೆಳಗಾವಿ – ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ. ಆದರೆ ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು ಸೋಮವಾರ (ಜೂ.14) ದಿಂದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ.

ಅಲ್ಲದೆ ಯಾವ ರೀತಿಯ ನಿಯಮಾವಳಿ ಇರಬೇಕೆನ್ನುವುದನ್ನು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಹಾಗಾಗಿ ಯಥಾ ಸ್ಥಿತಿ ಮುಂದುವರಿಸಿ ಮತ್ತು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಈಗಾಗಲೆ ಆದೇಶ ಹೊರಡಿಸಿದ್ದಾರೆ.

ಚೆಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ ಕೂಡ ಜೊತೆಗಿದ್ದರು ಎಂದು ತಿಳಿಸಿದ್ದಾರೆ. ವಾಣಿಜ್ಯೋದ್ಯಮ ಸಂಘದ ಹೇಮೇಂದ್ರ ಪೋರವಾಲ, ಕಿರಣ ಅಗಡಿ, ರೋಹಿತ್ ಕಪಾಡಿಯಾ, ಸುನೀಲ ನಾಯಕ, ದಿಲೀಪ ತಿಳ್ವೆ ಮೊದಲಾದವರಿದ್ದರು ಎಂದು ಅಧ್ಯಕ್ಷ ಪಂಚಾಕ್ಷರಿ ಚೊಣ್ಣದ್ ತಿಳಿಸಿದ್ದಾರೆ.

ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ