Breaking News

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಮೈತ್ರಿ ಅಗತ್ಯವಿದೆ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್

Spread the love

ಮುಂಬೈ: 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ “ಮಹಾಮೈತ್ರಿ” ರಚಿಸುವ ಅವಶ್ಯಕತೆಯಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ.

ಕಿಶೋರ್ ಅವರು ಮುಂಬೈನ ನಿವಾಸದಲ್ಲಿ ಶುಕ್ರವಾರ ಪವಾರ್ ಅವರನ್ನು ಭೇಟಿಯಾಗಿದ್ದು, ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ಸಭೆಯಲ್ಲಿ ಏನು ಚರ್ಚಿಸಲಾಗಿದೆ ಎನ್ನುವುದು ಬಹಿರಂಗವಾಗಿಲ್ಲ.

ಎನ್‌ಸಿಪಿ ಮುಖಂಡ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಾಮೈತ್ರಿ ರಚಿಸುವ ಅವಶ್ಯಕತೆಯಿದೆ.

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಎಲ್ಲ ಪಕ್ಷಗಳ ರಾಷ್ಟ್ರೀಯ ಮೈತ್ರಿ ಹೊಂದುವ ಅಗತ್ಯತೆಯ ಬಗ್ಗೆ ಮಾತನಾಡಿದ್ದರು. ಬಿಜೆಪಿಯನ್ನು ಎದುರಿಸಲು ಇಂತಹಾ ಸಮಾನ ಮನಸ್ಕರನ್ನು ಒಟ್ಟುಗೂಡಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ”.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ