Breaking News

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ಬಂದ ಭೂಪ

Spread the love

ಬಳ್ಳಾರಿ: ಸಾಮಾನ್ಯವಾಗಿ ಹಾವು ಕಂಡರೆ ಮಾರುದ್ದ ಓಡಿ ಹೋಗುವ ಜನರ ಮಧ್ಯೆ, ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಯುವನೋರ್ವ ಆಸ್ಪತ್ರೆಗೆ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಳ್ಳಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗ್ರಾಮದ ಯುವಕ ಕಾಡಪ್ಪನ ಕಾಲಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಎಚ್ಚರಗೊಂಡ ಕಾಡಪ್ಪ ಪಕ್ಕದಲ್ಲಿ ಇದ್ದ ಹಾವನ್ನು ನೋಡಿದ್ದಾನೆ. ಕೂಡಲೇ ಆ ಹಾವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಗ್ರಾಮದ ಮಧ್ಯದಲ್ಲಿಯೇ ನಡೆದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ.ಕಾಡಪ್ಪ ಹಾವು ಹಿಡಿದುಕೊಂಡು ಆಸ್ಪತ್ರೆಯ ಮುಂದೆ ಚಿಕಿತ್ಸೆಗಾಗಿ ಕಾದು ಕುಳಿತಿದ್ದು, ಆಸ್ಪತ್ರೆ ಆಗಮಿಸಿದ ವೈದ್ಯರು ಕಾಡಪ್ಪ ಕೈಯಲ್ಲಿ ಇದ್ದ ಹಾವುನ್ನು ಕಂಡ ಹೌಹಾರಿದ್ದಾರೆ. ಆಸ್ಪತ್ರೆಯ ಮುಂದೆ ಹಾವು ಹಿಡಿದುಕೊಂಡು ಕುಳಿತ ಕಾಡಪ್ಪನನ್ನು ನೋಡಲು ಜನ ಮುಗಿಬಿದಿದ್ದರು. ಬಳಿಕ ಆಸ್ಪತ್ರೆಯ ವೈದ್ಯರು ಕಾಡಪ್ಪನ ಕೈಯಲ್ಲಿ ಇದ್ದ ಹಾವನ್ನು ಬಿಡಿಸಿ ಚಿಕಿತ್ಸೆ ನೀಡಿದ್ದಾರೆ.


Spread the love

About Laxminews 24x7

Check Also

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the loveಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ