Breaking News

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ, ಕೋವಿಡ್ ಸಂಕಷ್ಟದಲ್ಲಿ ಯಾರು ಸಹ ನಾಯಕತ್ವ ಬದಲಾವಣೆ, ಭಿನ್ನ ಅನಿಸಿಕೆ ಕುರಿತು ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ ಎಂದರು.

ಜನಪ್ರತಿನಿಧಿಗಳಿಗೆ ಅಧಿಕಾರವೊಂದೇ ಅಲ್ಲ, ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಇದೀಗ ನಮ್ಮೆಲ್ಲರ ಮುಂದೆ ಇರುವುದು ಕೋವಿಡ್ ನಿಯಂತ್ರಣವಷ್ಟೇ ಎಂದು ಹೇಳಿದರು.

ದೇಶದ ಇಂದಿನ ಸಂಕಷ್ಟಗಳಿಗೆ ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣವೇ ಕಾರಣ ಎಂದರು.


Spread the love

About Laxminews 24x7

Check Also

ಮತಗಳ್ಳತನ ಆರೋಪ: 1 ವರ್ಷ ಕತ್ತೆ ಕಾಯುತ್ತಿದ್ರಾ? ಅಂತಾ ರಾಹುಲ್, ಕಾಂಗ್ರೆಸ್​ಗೆ ಜೋಶಿ ಪ್ರಶ್ನೆ

Spread the loveಧಾರವಾಡ, ಆಗಸ್ಟ್​ 02: ಲೋಕಸಭಾ ಚುನಾವಣೆಯ (Loksabha Election) ಸಂದರ್ಭದಲ್ಲಿ ಕರ್ನಾಟಕದಲ್ಲಿ ‘ಮತಗಳ್ಳನ’ ಆಗಿದೆ ಎಂಬ ಕಾಂಗ್ರೆಸ್​ ನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ