Breaking News

CD ಕೇಸ್​​; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್​, ಶ್ರವಣ್​​ಗೆ SIT ನೋಟಿಸ್​​

Spread the love

ಬೆಂಗಳೂರು: ಸಿ.ಡಿ ಕೇಸ್​ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್​ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್​​ಐಟಿ ನೋಟಿಸ್ ನೀಡಿದೆ.

ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್​ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್​​ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು ಜೂನ್ 15ರ ಮಂಗಳವಾರ 11 ಗಂಟೆಗೆ ಹಾಜರಾಗುವಂತೆ ಆರೋಪಿ ಶ್ರವಣ್​ಗೆ ನೋಟಿಸ್​ ನೀಡಿದ್ದಾರೆ.

ನಿನ್ನೆ ಹಿರಿಯ ಅಧಿಕಾರಿಗಳು ನೀಡಿದ ಸಲಹೆ ಆಧಾರದಲ್ಲಿ ನಡೆದ ವಿಚಾರಣೆಯಲ್ಲಿ ಈಗಾಗಲೇ ಅರೋಪಿಗಳು ತಮ್ಮ ವಕೀಲರ ಜೊತೆ ಸಮಾಲೋಚನೆ ನಡೆಸಿರುವಂತೆಯೇ.. ವಕೀಲರು ನೀಡಿರುವ ಸಲಹೆಯಂತೆಯೇ ಉತ್ತರ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.


Spread the love

About Laxminews 24x7

Check Also

GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Spread the loveಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ