ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ.
ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳು ನಾಳೆಯಿಂದ ಅನ್ ಲಾಕ್ ಆಗಲಿದ್ದು, ಆದರೆ ಕಠಿಣ ನಿಯಮಗಳು ಮುಂದುವರೆಯಲಿವೆ.
Laxmi News 24×7