ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ.
ಹಾಸನ ಹೊರ ವಲಯದಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಯುವತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಸಚಿವ ಸಿಟಿ.ರವಿ, ರಸ್ತೆಯಲ್ಲಿ ಜನ ಗುಂಪು ಕಟ್ಟಿರುವುದನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ.ಈ ವೇಳೆ ಯುವತಿ ಪ್ರಜ್ಞಾಹೀನವಾಗಿದ್ದನ್ನು ಗಮನಿಸಿದ ಸಚಿವರು ತಕ್ಷಣ ಯುವತಿಯನ್ನು ತಮ್ಮ ವಾಹನದಲ್ಲಿ ಹಾಸನದ ಹಿಮ್ಸ್ ಅಸ್ಪತ್ರೆಯ ನಾನ್ ಕೋವಿಡ್ ವಿಭಾಗಕ್ಕೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ವೈದ್ಯರಿಗೆ ಯುವತಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚಿಸಿ ಅಲ್ಲಿಂದ ತೆರಳಿದ್ದಾರೆ
Laxmi News 24×7