ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿ ದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ( ಜೂ.13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನೂ, ದಕ್ಷಿಣ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ಉತ್ತಮ ಮಳೆಯಾಗಿದೆ.
Laxmi News 24×7