Breaking News

ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.

Spread the love

ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರು ಭಾಗಿಯಾಗಿರುವುದು ಕಂಡು ಬಂದಿರುತ್ತದೆ. ವಿದೇಶಗಳಿಂದ ಅಕ್ರಮವಾಗಿ ಬಂದು ಇಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕೆಲವರು ಇಲ್ಲಿ ಆಧಾರ್ ಕಾರ್ಡ್ ಕೂಡ ಮಾಡಿಸಿಕೊಂಡಿರುವುದು ಕೂಡ ತಿಳಿದು ಬಂದಿದೆ. ಅಲ್ಲದೇ ಪೊಲೀಸರು ಮಾನವ ಕಳ್ಳಸಾಗಣೆ ಪ್ರಕರಣಳನ್ನು ಕೂಡ ಪತ್ತೆ ಹಚ್ಚಿದ್ದರು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ