Breaking News

ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

Spread the love

ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ.

ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು ಎಂದು ಆಸ್ಪತ್ರೆ ವಿವರಿಸಿದೆ.

ಮೆದುಳಿನ ಸಿ.ಟಿ. ಸ್ಕ್ಯಾನ್ ಮಾಡಿದಾಗ ಮೆದುಳಿಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗುತ್ತಿತ್ತು. ಮೆದುಳಿನ ರಕ್ತಸ್ರಾವವನ್ನು ತಡೆಯಲು ತಕ್ಷಣವೇ ಬ್ರೇನ್ ಸರ್ಜರಿ ಮಾಡಲಾಯಿತು. ಪ್ರಸ್ತುತ ಅವರು ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದು, ಕೋಮಾ ಸ್ಥತಿಯಲ್ಲೇ ಮುಂದುವರಿದಿದ್ದಾರೆ. ಅಲ್ಲದೆ ಅವರ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಅವರ ಆರೋಗ್ಯದ ಸ್ಥಿತಿಗತಿ ಕುರಿತು ನಿಗಾ ವಹಿಸಿದ್ದೇವೆ. ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‍ನಲ್ಲಿ ವಿವರಿಸಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ