ಕೋಲಾರ: ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆ ಯೂತ್ ಕಾಂಗ್ರೆಸ್ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಕೋಲಾರ ನಗರದ ನಚಿಕೇತ ನಿಲಯ ಮುಂಭಾಗದಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಹ್ಯಾರೀಸ್, ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬೆನಿಟೋ ಫ್ರಾನ್ಸಿಸ್ ಸೇರಿದಂತೆ 10 ಜನರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
Laxmi News 24×7