Breaking News

ಉಡುಪಿ: ಜಿಲ್ಲೆಯ ತೆಂಕಪೇಟೆಯ ನಿವಾಸಿಯೊಬ್ಬರ ಮೈಗೆ ಕಬ್ಬಿಣ ಸ್ಟೀಲ್ ಇಂಡೋಲಿಯಂ ವಸ್ತುಗಳು ಅಂಟುತ್ತದೆ.

Spread the love

ಉಡುಪಿ: ಜಿಲ್ಲೆಯ ತೆಂಕಪೇಟೆಯ ನಿವಾಸಿಯೊಬ್ಬರ ಮೈಗೆ ಕಬ್ಬಿಣ ಸ್ಟೀಲ್ ಇಂಡೋಲಿಯಂ ವಸ್ತುಗಳು ಅಂಟುತ್ತದೆ. ಇದೊಂದು ಕೌತುಕ.. ವಿಸ್ಮಯ.. ಮೈಯ್ಯಲ್ಲಿ ಅಯಸ್ಕಾಂತೀಯ ಶಕ್ತಿಯಿದೆ. ಹೀಗಂತ ಒಂದು ವೀಡಿಯೋ ಉಡುಪಿಯಲ್ಲಿ ಶೇರ್ ಆಗುತ್ತಿದೆ.

ವೈರಲ್ ಆಗುತ್ತಿರುವ ವೀಡಿಯೋದಲ್ಲಿರುವ ವ್ಯಕ್ತಿ ರಾಮದಾಸ್ ಶೆಟ್ ಎಂದು ಗುರುತಿಸಲಾಗಿದ್ದು, ಉಡುಪಿಯ ತೆಂಕಪೇಟೆ ಪೂರ್ಣಪ್ರಜ್ಞ ಕಾಲೇಜು ಸಮೀಪದವರಾಗಿದ್ದಾರೆ. ಟಿವಿಯಲ್ಲಿ ಈ ಹಿಂದೆ ಪ್ರಸಾರವಾದ ವೀಡಿಯೋಗಳನ್ನು ನೋಡಿ, ಮನೆಯಲ್ಲೇ ಇದ್ದ ರಾಮದಾಸ್ ತನ್ನನ್ನು ಪ್ರಯೋಗಕ್ಕೆ ಒಳಪಡಿಸಿದ್ದಾರೆ. ಈ ವೇಳೆ ಕೆಲವೊಂದು ವಸ್ತುಗಳು ಅವರ ದೇಹಕ್ಕೆ ಅಂಟಿಕೊಂಡಿದ್ದು, ಅವರಿಗೆ ಆಶ್ಚರ್ಯವಾಗಿದೆ.

ಕೊರೊನಾ ವಿರುದ್ಧ ವ್ಯಾಕ್ಸಿನ್ ತೆಗೆದುಕೊಂಡ ಮೇಲೆ ಹೀಗಾಗಿದೆ ಎಂದು ವೀಡಿಯೋ ವೈರಲಾಗಿದೆ. ವ್ಯಾಕ್ಸಿನ್ ಪಡೆಯೋ ಮೊದಲು ಈ ರೀತಿ ರಾಮದಾಸ್ ಯಾವುದೇ ಪ್ರಯತ್ನ ನಡೆಸಿಲ್ವಂತೆ. ಹಾಗಾಗಿ ವ್ಯಾಕ್ಸಿನ್‍ಗೂ ಈ ಬೆಳವಣಿಗೆಗೂ ಸಂಬಂಧ ಇಲ್ಲ ಎಂದೂ ಹೇಳಲಾಗುತ್ತಿದೆ. ದೆಹಲಿ ಮತ್ತು ಪಂಜಾಬ್‍ನಲ್ಲಿ ನಡೆದ ಇಂತಹ ಘಟನೆಯ ಬಗ್ಗೆ ಈಗಾಗಲೇ ತಜ್ಞರು, ಅಭಿಪ್ರಾಯ ವ್ಯಕ್ತಪಡಿಸಿದ್ದು ವ್ಯಾಕ್ಸಿನ್ ಪಡೆಯುವುದರಿಂದ ಈ ರೀತಿ ಆಗುವುದಿಲ್ಲ ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದ್ದರು. ಕೆಲವು ವ್ಯಕ್ತಿಗಳ ಮೈಗುಣಕ್ಕೆ ಹೀಗಾಗುತ್ತದೆ. ಈ ಬಗ್ಗೆ ಸಂಶೋಧನೆ ಆಗಬೇಕು ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ