Breaking News

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ

Spread the love

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ.

ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹುಕ್ಕೇರಿ ಸಿಪಿಐ ರಮೇಶ ಜಾಯಾಗೋಳ, ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ