Breaking News

ಚಿಕ್ಕಪ್ಪನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ, ಬೆದರಿಕೆ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಸಂಬಂಧಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಪಿ ಬಿ.ಸಿ. ರೋಡ್ ಸಮೀಪದ ಭಂಡಾರಿ ಬೆಟ್ಟುವಿನಲ್ಲಿ ಘಟನೆ ನಡೆದಿದೆ. ತನ್ನ ಪತ್ನಿಯ ಅಕ್ಕನ ಮಗಳ ಮೇಲೆ ನಿರಂತರ ಆರೋಪಿ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಅಜ್ಜಿಯ ಮನೆಯಲ್ಲಿ ವಿದ್ಯಾರ್ಥಿನಿ ವಾಸವಾಗಿದ್ದು, ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ ಪತ್ನಿ-ಮಕ್ಕಳೊಂದಿಗೆ ಅಲ್ಲೇ ವಾಸವಾಗಿದ್ದ. ಯುವತಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರಕ್ಕೆ ಬಳಸಿಕೊಂಡಿದ್ದು, ಕೊಲೆ ಬೆದರಿಕೆ ಹಾಕಿದ್ದ. ಚಿಕ್ಕಪ್ಪನ ಹಿಂಸೆ ತಾಳದೆ ಮನೆಯವರಿಗೆ ವಿಷಯ ತಿಳಿಸಿದ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ ಎನ್ನಲಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ