Breaking News

ಯಡಿಯೂರಪ್ಪ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿರಲಿ: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಾಧ್ಯಂತ ಈಗಾಗಲೇ ಬೈಲಹೊಂಗಲ, ಗೋಕಾಕ,ಬೆಳಗಾವಿ, ಕುಡಚಿ,ರಾಯಭಾಗ ಮತ್ತು ಕಾಗವಾಡ ಸೇರಿದಂತೆ ಹಲವೆಡೆ ಭೇಟಿ ನೀಡಿ ಕೊರೊನಾ ಸೊಂಕಿತರು ಮತ್ತು ವೈದ್ಯರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇವೆ.

ಸಮಸ್ಯೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ ಎಂದರಲ್ಲದೆ ತೈಲ ಬೆಲೆ ಏರಿಕೆಯ ಶತಕ ದಾಟುತ್ತಿದೆ ಆ ಕಾರಣದಿಂದ ಬಡವರು,ರೈತರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿವ್ರ ತೊಂದರೆಯಾಗುತ್ತಿದ್ದು ಇಂದು ತಾಲೂಕು ಮಟ್ಟಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ ಸರ್ಕಾರ ಈ ಬಗ್ಗೆ ಕೂಡಲೇ ಸ್ಪಂದಿಸಿ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಪಕ್ಷ ಇದನ್ನು ಯಾವುದೇ ರೀತಿ ಎನ್ ಕ್ಯಾಶ್ ಮಾಡಿಕೊಳ್ಳುವದಿಲ್ಲ ಯಡ್ಯೂರಪ್ಪನವರೇ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಆಶಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ನಾಯಕರ ಬಂಡಾಯದ ಬಗ್ಗೆ ಕುಟುಕಿದರು.


Spread the love

About Laxminews 24x7

Check Also

ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..

Spread the loveಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ