Breaking News

ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನದ ಟೈರ್ ಸ್ಫೋಟ

Spread the love

ಹುಬ್ಬಳ್ಳಿ:ಕಣ್ಣೂರುನಿಂದ ಆಗಮಿಸಿದ್ದ ಇಂಡಿಗೋ ವಿಮಾನ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಟೈರ್ ಸ್ಫೋಟ ಗೊಂಡ ಘಟನೆ, ಸೋಮವಾರ ರಾತ್ರಿ8:30ರ ಸುಮಾರಿಗೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.

15 ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ವಿಮಾನವನ್ನು, ಪೈಲಟ್‌ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಆಗದಿಂದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಟಾಯರ್ ಬ್ಲಾಸ್ಟ್ ಆಗಿದೆ ಎಂದು ಮೂಲಗಳು ತಿಳಿಸಿವೆ.

ಕಣ್ಣೂರಿನಿಂದ ಆಗಮಿಸಿದ್ದ ವಿಮಾನ ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಬೇಕಿತ್ತು. 26 ಪ್ರಯಾಣಿಕರು ಬೆಂಗಳೂರಿಗೆ ಪ್ರಯಾಣಿಸುವವರಿದ್ದರು. ವಿಮಾನ ಹಾರಾಟ ರದ್ದಾಗಿದ್ದರಿಂದ ಕಂಪನಿಯವರು ಅವರಿಗೆಲ್ಲ ಪರ್ಯಾಯ ವ್ಯವಸ್ಥೆ ಮೂಲಕ ಬೆಂಗಳೂರಿಗೆ ಕಳುಹಿಸಿದರು ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ