Breaking News

ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ

Spread the love

ಬೆಂಗಳೂರು: ಕೊರೊನಾದಿಂದ ಸಂಕಷ್ಟದಿಂದ ಸಿಲುಕಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಮಧ್ಯೆ ಆತಂಕ ಸುದ್ದಿ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆ ಆಗಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿಕೆ ಆಗ್ತಿದೆ. 5% ಒಳಗಡೆಯೇ ಏರಿಳಿಕೆ ಆಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ 3.05% ಗೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಕಳೆದ 10 ದಿನಗಳಿಂದ ಪಾಸಿಟಿವಿಟಿ ರೇಟ್ ಒಂದೊಂದೆ ಪರ್ಸೆಂಟ್ ಇಳಿಕೆಯಾಗುತ್ತಿದೆ.

ಇಂದು ಕೂಡ ಬೆಂಗಳೂರಿನಲ್ಲಿ ಕಡಿಮೆ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಬಿಬಿಎಂಪಿ ವ್ಯಾಪ್ತಿ ಸೇರಿ 1,297 ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಮೂರು ತಿಂಗಳ ನಂತರ ಎರಡು ಸಾವಿರಕ್ಕಿಂತ ಒಳಗಡೆ ಕೇಸ್ ದಾಖಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲೂ 200 ಕ್ಕಿಂತ ಕಡಿಮೆ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ