Breaking News

ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?

Spread the love

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಪಕ್ಷದೊಳಗಿನ ಬಿಕ್ಕಟ್ಟು, ಕೋವಿಡ್ ನಿರ್ವಹಣೆ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರು ದುರುಪಯೋಗ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಸೇರಿ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಗೆ ದೂರು ನೀಡಲಾಗಿದೆ.

ಟಿ.ಜೆ.ಅಬ್ರಾಹಂ ಎನ್ನುವವರು ದೂರು ನೀಡಿದ್ದು, ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಬಿಎಸ್ ವೈ ಅವರು ನಾಲ್ಕನೇ ಬಾರಿ ಸಿಎಂ ಆದ ಬಳಿಕ ಅವರ ಮೊಮ್ಮಗ ಶಶಿಧರ ಮರಡಿ ಎಂಬರು ಚಂದ್ರಕಾಂತ್ ರಾಮಲಿಂಗಂ ಎಂಬ ಡೆವಲಪರ್ ರಿಂದ ಬ್ಲಿಲ್ ಕ್ಲಿಯರಿಂಗ್ ಗಾಗಿ 12 ಕೋಟಿ ರೂ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಹಣ ವರ್ಗಾವಣೆ ಬಗ್ಗೆ ಶಶಿಧರ ಮರಡಿ ಮತ್ತು ಚಂದ್ರಕಾಂತ್ ಅವರ ನಡುವೆ ನಡೆದ ವಾಟ್ಸಪ್ ಚಾಟ್ ನ ಮಾಹಿತಿಯನನ್ನು ದೂರುದಾರ ಟಿ.ಜೆ.ಅಬ್ರಾಹಂ ಅವರು ಇಡಿ ಗೆ ನೀಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ ಮತ್ತು ವಿರೂಪಾಕ್ಷಪ್ಪ ಯಮಕನಮರಡಿ ಎಂಬವರ ವಿರುದ್ಧ ದೂರು ನೀಡಲಾಗಿದೆ.

ಅಧಿಕಾರ ಉಳಿಸಿಕೊಳ್ಳುವ ಸಂಕಷ್ಟದಲ್ಲಿರುವ ಸಿಎಂ ಯಡಿಯೂರಪ್ಪಗೆ ಈ ದೂರು ಮತ್ತಷ್ಟು ತಲೆ ನೋವು ತಂದಿರಿಸಿದೆ. ಈ ದೂರನ್ನು ಜಾರಿ ನಿರ್ದೇಶನಾಲಯವು ಯಾವ ರೀತಿ ಪರಿಗಣಿಸುತ್ತದೆ, ಮುಂದೆ ಯಡಿಯೂರಪ್ಪ, ವಿಜಯೇಂದ್ರ ಇದನ್ನು ಯಾವ ರೀತಿ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ