Breaking News
Home / ರಾಜಕೀಯ / ಕೊವಿಡ್ ಮೂರನೇ ಅಲೆ: ಗರಿಷ್ಠ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಹಿಳಾ ಇಲಾಖಾ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ತಾಕೀತು

ಕೊವಿಡ್ ಮೂರನೇ ಅಲೆ: ಗರಿಷ್ಠ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಹಿಳಾ ಇಲಾಖಾ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ತಾಕೀತು

Spread the love

ಹಾವೇರಿ: ಮಕ್ಕಳ ಮೇಲೆ ಕೊವಿಡ್ ಮೂರನೇ ಅಲೆಯ ಸಂಭಾವ್ಯ ಪರಿಣಾಮ ನಿಯಂತ್ರಣದ ನಿಟ್ಟಿನಲ್ಲಿ ಸೋಂಕಿನಿಂದ ಮಕ್ಕಳ ರಕ್ಷಣೆ, ಮುನ್ನೆಚ್ಚರಿಕೆ, ಜಾಗೃತಿ, ಪ್ರತ್ಯೇಕ ಕೋವಿಡ್ ವಾರ್ಡ್‍ಗಳ ಸಿದ್ಧತೆ, ಪಾಲಕರಿಗೆ ವ್ಯವಸ್ಥೆ ಕುರಿತಂತೆ ಶಿಶು ಅಭಿವೃದ್ಧಿ ಅಧಿಕಾರಿಗಳು ಕ್ಷೇತ್ರಮಟ್ಟಕ್ಕೀಳಿದು ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಾಕೀತು ಮಾಡಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳ ಕಾರ್ಯವೈಖರಿಯ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಎರಡನೇ ಸುತ್ತಿನ ಪ್ರವಾಸದ ಸಂದರ್ಭದಲ್ಲಿ ಕಾರ್ಯವೈಖರಿಯನ್ನು ಸುಧಾರಿಸಿಕೊಳ್ಳದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಉಪನಿರ್ದೇಶಕ ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು, ಕೊವಿಡ್ ಜೊತೆಗೆ ಇತರ ಗಂಭೀರ ಕಾಯಿಲೆ ಪೀಡತ ಮಕ್ಕಳನ್ನು ಹೋಂ ಐಸೋಲೇಷನ್ ಬದಲು ಕೋವಿಡ್ ಮಕ್ಕಳ ವಾರ್ಡ್‍ಗಳಲ್ಲಿ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದರು.

ಮಕ್ಕಳ ಕೊವಿಡ್ ವಾರ್ಡ್ ಹಾಗೂ ಮಕ್ಕಳ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕ್ಕ ಮಕ್ಕಳ ಜೊತೆಗೆ ಪಾಲಕರಿಗೂ ಉಳಿದುಕೊಳ್ಳಲು ವ್ಯವಸ್ಥೆ ಕೈಗೊಳ್ಳುವುದು ಅತ್ಯವಶ್ಯವಾಗಿದೆ. ಐಸಿಯು ವಾರ್ಡ್‍ಗಳಲ್ಲಿ ಮಕ್ಕಳ ಜೊತೆಗೆ ಪಾಲಕರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಪಾಲಕರಿಗೆ ಪ್ರತ್ಯೇಕ ವ್ಯವಸ್ಥೆಮಾಡಿ 10 ರಿಂದ 18 ವರ್ಷದೊಳಗಿನ ಸೋಂಕಿತ ಮಕ್ಕಳ ಪೈಕಿ ಬಾಲಕಿಯರಿಗೆ ಹಾಗೂ ಬಾಲಕರಿಗೆ ಪ್ರತ್ಯೇಕ ವ್ಯವಸ್ಥೆ ಕೈಗೊಳ್ಳುವಂತೆ ಸಲಹೆ ನೀಡಿದರು.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ