Breaking News

ಸಾರಿಗೆ ನೌಕರರ ಕೂಟದಲ್ಲಿ ಒಡಕು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬಿದ್ದ ಪದಾಧಿಕಾರಿಗಳು

Spread the love

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ.

ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು ಪದಾಧಿಕಾರಿಗಳು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು, ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೆಲವು ಪದಾಧಿಕಾರಿಗಳು ತಿರುಗಿಬಿದ್ದಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅಧ್ಯಕ್ಷ ಚಂದ್ರು ಅವರ ಏಕಪಕ್ಷೀಯ ನಿರ್ಧಾರದಿಂದ ಬೇಸತ್ತ ಅನೇಕರು ರಾಜೀನಾಮೆ ನೀಡಿದ್ದಾರೆ. ಪ್ರಧಾನ ಕಾರ್ಯದರ್ಶಿ ಹೆಚ್.ಡಿ. ನಾಗೇಂದ್ರ, ಖಜಾಂಚಿ ಜಗದೀಶ್, ಪ್ರಚಾರ ಸಮಿತಿ ಕಾರ್ಯದರ್ಶಿ ಚೇತನ್ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.

ಮುಷ್ಕರದಲ್ಲಿ ಭಾಗಿಯಾಗಿದ್ದ ಅನೇಕ ನೌಕರರನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಹಲವರನ್ನು ವರ್ಗಾವಣೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್, ಚಂದ್ರು ಅವರ ಪ್ರತಿಷ್ಠೆಯಿಂದಾಗಿ ಇಂತಹ ಸಮಸ್ಯೆ ಎದುದಾಗಿದೆ ಎಂದು ಹೇಳಲಾಗಿದೆ


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ