Breaking News

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್

Spread the love

ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ.

ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮದುವೆ ನಿಗದಿಯಾಗಿತ್ತು. ಮಕ್ಕಳ ಸಹಾಯವಾಣಿಗೆ ಬಂದ ಕರೆಯ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ಗ್ರಾಮಕ್ಕೆ ತೆರಳಿದ್ದು, ನಿಗದಿಯಾಗಿದ್ದ ಮದುವೆಯನ್ನು ತಡೆದಿದ್ದಾರೆ.

ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅಪ್ರಾಪ್ತೆಯನ್ನು ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲ್ಯವಿವಾಹ ಮಾಡದಂತೆ ಪೋಷಕರಿಗೆ ತಾಕೀತು ಮಾಡಲಾಗಿದೆ. ತಹಶೀಲ್ದಾರ್ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಬಾಲ್ಯವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ