ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಗರಿಗೆದರಿರುವಂತ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಯ ಹಿನ್ನಲೆಯಲ್ಲಿ, ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಮದಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು,
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್ ಸಹಿಸದೇ ಬರೀ ವಾಗ್ದಾಳಿ ನಡೆಸುತ್ತಿದೆ. ಜೆಡಿಎಸ್ ಮಾತ್ರ ಐಸೋಲೇಷನ್ ನಲ್ಲಿ ಇದೆ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಚರ್ಚಿಸಲು ಕರ್ನಾಟಕಕ್ಕೆ ಆಗಮಿಸಿದ್ದೇನೆ ಎಂದರು.
ಇನ್ನೂ ತೀವ್ರ ಕುತೂಹಲ ಕೆರಳಿಸಿದ್ದಂತ ಮುಖ್ಯಮಂತ್ರಿ ಬದಲಾವಣೆ ಕುರಿತಂತ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೀಗ ಆಗಮಿಸಿದ್ದೇನೆ. ಎರಡು ದಿನ ರಾಜ್ಯದಲ್ಲಿಯೇ ಇರಲಿದ್ದೇನೆ. ರಾಜ್ಯ ರಾಜಕೀಯ ಬೆಳವಣಿಗೆ ಕುರಿತಂತೆ ಸದ್ಯಕ್ಕೆ ಈ ಕೂಡಲೇ ಯಾವುದೇ ಪ್ರತಿಕ್ರಿಯಿಸೋದಿಲ್ಲ ಎಂಬುದಾಗಿ ತಿಳಿಸುವ ಮೂಲಕ, ವಿಮಾನ ನಿಲ್ದಾಣದಿಂದ ಕೆಕೆ ಗೆಸ್ಟ್ ಹೌಸ್ ಗೆ ತೆರಳಿದರು.
Laxmi News 24×7