ಹುಬ್ಬಳ್ಳಿ: ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು ಎಂದು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಐದು ಬಾರಿ ಶಾಸಕನಾಗಿದ್ದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಟ್ಟು ಮಾಡಿ ಅಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಯಡಿಯೂರಪ್ಪನವರ ಬೆಳವಣಿಗೆಗೆ ಯಾರು ಕಾರಣರು ಎಂಬುದನ್ನು ಅವರೇ ತಿಳಿದುಕೊಳ್ಳಬೇಕು. ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ನಾನೂ ಕೂಡ ಅಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದ್ರೆ, ಸಚಿವ ಸ್ಥಾನ ಸಿಗಲಿಲ್ಲ. ಶಾಸಕನಾಗಿ ನಾನು ನನ್ನ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿಯಲ್ಲಿ ಅರವಿಂದ ಬೆಲ್ಲದ್ ಯಾವ ರೀತಿ ಕೆಲಸ ಮಾಡಿದ್ದಾರೆ ಎಂದು ಪಕ್ಷದ ಮುಖಂಡರಿಗೆ ಗೊತ್ತಿರುತ್ತದೆ. ಅರವಿಂದ ಅವರಿಗೆ ಸಚಿವ ಸ್ಥಾನ ಕೊಡಬೇಕೋ ಬೇಡವೋ ಅಥವಾ ಮುಖ್ಯಮಂತ್ರಿ ವಿಚಾರವಾಗಿ ಅವರು ದೆಹಲಿಗೆ ಹೋಗಿದ್ದಾರೆ ಎನ್ನುವ ಎಲ್ಲಾ ವಿಷಯಗಳ ಸಂಬಂಧ ಪಕ್ಷ ಪ್ರತಿಕ್ರಿಯೆ ನೀಡುತ್ತದೆ. ಈಗ ನಾನು ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದೇನೆ. ಈ ಬೆಳವಣಿಗೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
Laxmi News 24×7