ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇದೀಗ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಕೋವಿಡ್-19 ಪರೀಕ್ಷೆಗಾಗಿ ಸ್ಯಾಂಪಲ್ ಪಡೆಯಲಾಗಿದೆ. ಕೋವಿಡ್ ವರದಿಗಾಗಿ ಸದ್ಯ ಮಣಿಪಾಲ ಆಸ್ಪತ್ರೆ ವೈದ್ಯರು ಕಾಯುತ್ತಿದ್ದಾರೆ.
https://youtu.be/uiE8UjGW7jE